ಲಾಯಿಲ: ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಹುಟ್ಟುಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾರ್ಥವಾಗಿ ಕರ್ನೋಡಿ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

0

ಲಾಯಿಲ: ಜೂ.26ರಂದು ಲಾಯಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿಯಲ್ಲಿ ರಾಜಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜಕೇಸರಿ ಸಂಘಟನೆಯ 540ನೇ ಸೇವಾ ಕಾರ್ಯಕ್ರಮವಾಗಿ ಬಡ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾ ಬೆನೆಡಿಕ್ಟ ಸಲ್ಡಾನರವರು ವಹಿಸಿದ್ದರು.ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರಾದ ಪ್ರಸಾದ್ ಶೆಟ್ಟಿ ಎಣಿಂಜೆ, ಮಹೇಶ.ಕೆ, ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ರಿ ನ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ , ಜೂ.28ರಂದು ಹುಟ್ಟು ಹಬ್ಬವನ್ನು ಆಚರಿಸಲಿರುವ ಪ್ರೇಮ್ ರಾಜ್ ರೋಶನ್ ಸಿಕ್ವೇರಾ ಮತ್ತು ಶಾಲಾ ಮುಖ್ಯೋಪಾಧ್ಯಾಯ ಜಗನ್ನಾಥ.ಎಮ್ ರವರು ಉಪಸ್ಥಿತರಿದ್ದರು.

ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.ಅಥಿತಿಗಳನ್ನು ಮುಖ್ಯೋಪಾಧ್ಯಾಯರು ಸ್ವಾಗತಿಸಿ ಶಿಕ್ಷಕರಾದ ಕೃಷ್ಣ ಕುಮಾರ್ ಧನ್ಯವಾದವಿತ್ತರು.ಶಿಕ್ಷಕಿಯಾದ ಉಷಾ.ಕೆ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕರು ಮತ್ತು ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here