ಮಚ್ಚಿನ 2023-24ನೇ ಸಾಲಿನ ಪ್ರಥಮ ಗ್ರಾಮ ಸಭೆ

0

ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆರವರ ಅಧ್ಯಕ್ಷತೆಯಲ್ಲಿ ಸಮುದಾಯ ಭವನದಲ್ಲಿ ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಉಪವಿಭಾಗದ ಸಹಾಯಕ ಇಂಜಿನೀಯರ್ ನಿತಿನ್ ಭಾಗವಹಿಸಿ ಗ್ರಾಮ ಸಭೆಯನ್ನು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪದ್ಯಕ್ಷೇ ಡೀಕಮ್ಮ, ಗ್ರಾಮ ಪಂಚಾಯತ್ ಅಭವೃದ್ಧಿ ಅಧಿಕಾರಿ ಗೌರಿಶಂಕರ್ ಹೆಚ್.ಎಸ್., ಕಾರ್ಯದರ್ಶಿ ಸಂಜೀವ ವಿ. ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಇಲಾಖಾ ಅಧಿಕಾರಿ, ಸಿಬಂದಿ ವರ್ಗ, ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಅಭಿವೃದ್ಧಿ ಅಧಿಕಾರಿ ಕಳೆದ ಸಭೆಯ ನಡಾವಳಿ, ವಾರ್ಡ್ ಸಬೆಯ ನಡಾವಳಿ, ಜಮಾಖರ್ಚಿನ ವಿವರ ನೀಡಿದರು.ವಿವಿಧ ಇಲಾಖಾ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here