ಆರಂಬೋಡಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

0

ಆರಂಬೋಡಿ: ಆರಂಬೋಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜೂನ್ 27 ರಂದು ಗುಂಡೂರಿ ತುಂಬೆದಲ್ಕೆ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಮಂಜು ನಾಯ್ಕ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್, ಸದಸ್ಯರುಗಳಾದ ಸುದರ್ಶನ ಶೆಟ್ಟಿ, ಸತೀಶ್ ಪೂಜಾರಿ, ಹೆಚ್.ಪ್ರಭಾಕರ್, ಸುರೇಂದ್ರ ಶೆಟ್ಟಿ, ದೀಕ್ಷಿತಾ, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸ್ಮೃತಿ ಯು.ಸ್ವಾಗತಿಸಿ ವರದಿ, ಲೆಕ್ಕ ಪತ್ರ ವಾಚಿಸಿದರು.ಸಿಬ್ಬಂದಿಗಳು ಸಹಕರಿಸಿದರು.ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ವರ್ಷ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here