ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ ರವರು “ನಿಮ್ಮ ಜೀವನದಲ್ಲಿ ಯೋಗವನ್ನು ಮಾಡುವ ಅಭ್ಯಾಸವನ್ನು ಬೆಳೆಸಿಕೊಳ್ಳಿ” ಎಂದರು.ಯೋಗ ಗುರುಗಳಾದ ಅಮಿತ್ ಉಪ್ಪಿನ ರವರು “ಯೋಗದಿಂದ ಆಂತರಿಕ ಶಾಂತಿಯನ್ನು ಕಂಡುಕೊಳ್ಳಬಹುದು” ಎಂದರು.
ಮುರಳಿ ಯೋಗ ತಂಡ ಹೊಸ್ಮಾರು ಅರ್ಟ್ರಿಸ್ಟಿಕ್ ಯೋಗ ಪ್ರದರ್ಶನ ನೀಡಿದರು.ಅಮಿತ್ ಉಪ್ಪಿನ ರವರ ಮಾರ್ಗದರ್ಶನದಲ್ಲಿ ಮಕ್ಕಳು ಯೋಗಾಭ್ಯಾಸ ಮಾಡಿದರು.
ಮುಖ್ಯ ಶಿಕ್ಷಕಿ ಶೋಭಾ ಕೃಷ್ಣ ಕುಮಾರ್ ಮತ್ತು ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ವೀರೇಂದ್ರ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಸೌಮ್ಯ ನಿರೂಪಿಸಿ, ಸಹ ಶಿಕ್ಷಕಿ ಕಾವ್ಯ ಸ್ವಾಗತಿಸಿ , ಸಹ ಶಿಕ್ಷಕಿ ಶ್ರೀಮತಿ ನಿಶ್ಮಿತಾ ವಂದಿಸಿದರು.