ಚಾರ್ಮಾಡಿ: ನಿಯಂತ್ರಣ ತಪ್ಪಿ ಪಲ್ಟಿಯಾದ ಪಿಕಪ್ ವಾಹನ

0

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನವೊಂದು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಘಟನೆ ಜೂ.27ರಂದು ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆಲೇಖಾನ್ ಎಂಬಲ್ಲಿ ಮನೆಗೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿದ್ದು ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾಗಿದೆ.

ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳೆಯಿಂದ ತೇವಗೊಂಡಿದ್ದ ರಸ್ತೆಯಿಂದ ಘಟನೆ ಸಂಭವಿಸಿದ್ದು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here