

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜೂನ್ 27ರಂದು ಬೆಳ್ತಂಗಡಿಯ ಪಡಂಗಡಿಗೆ ದಾಳಿ ನಡೆಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬವರ ಮನೆಗೆ ದಾಳಿ ನಡೆಸಿದ ಎನ್.ಐ.ಎ ಅಧಿಕಾರಿಗಳು ಕೆಲವು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಜೂನ್ 27ರಂದು ಕಾರ್ಯಾಚರಣೆ ನಡೆಸಿರುವ ಎನ್.ಐ.ಎ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.