ಮದ್ದಡ್ಕ: ನೇರಳಕಟ್ಟೆಯಲ್ಲಿ ಕಳ್ಳತನ- ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾದ ಕಳ್ಳರು

0

ಬೆಳ್ತಂಗಡಿ: ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ರತ್ನಾ ಎಂಬವರ ಮನೆಗೆ ಜೂ 27 ರಂದು ಕಳ್ಳರು ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ.

ನಿನ್ನೆ( ಜೂ.27) ರಾತ್ರಿ 9 ಗಂಟೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ಮನೆಯಿಂದ ಚಿನ್ನಾಭರಣ ಹಾಗೂ ನಗ ನಗದು ದೋಚಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here