ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು 28-06-2023 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್, ಶಾಲಾ ಮುಖೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನಾಟಕ, ನೃತ್ಯದ ಮೂಲಕ  ಪ್ರದರ್ಶಿಸಿದರು.ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ದೇವರು ಒಬ್ಬರೇ ಬೇರೆ ಬೇರೆ ಧರ್ಮಗಳ ಮೂಲಕ ಪ್ರೀತಿ, ಪ್ರೇಮ ಮತ್ತು ಸೇವೆಗಳ ಮೂಲಕ  ನಮ್ಮನ್ನು ಹರಸುತ್ತಾರೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ  ಶುಭಾಶಯವನ್ನು ಕೋರಿದರು.

ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಶಬೀಬ್ ರವರು ನಿರೂಪಿಸಿ, ಕುಮಾರಿ ಶೈಮಾ ರವರು ಸ್ವಾಗತಿಸಿ, ಕುಮಾರಿ ಅಹಿಸ್ಮ ರವರು ಧನ್ಯವಾದವನ್ನು ಸಮರ್ಪಿಸಿದರು.ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

LEAVE A REPLY

Please enter your comment!
Please enter your name here