Site icon Suddi Belthangady

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗಾಗಿ ಪ್ರೇರಕ ಭಾಷಣ ಕಾರ್ಯಕ್ರಮ

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.28 ರಂದು ಮಕ್ಕಳಿಗಾಗಿ ಪ್ರೇರಕ ಭಾಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಶ್ರೀ ನಸೀರ್ ಅಹಮದ್ ಖಾನ್ ರವರು ವಹಿಸಿಕೊಂಡು ಈ ಕಾರ್ಯಕ್ರಮದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಹೊಸ್ಮಾರು ಕ್ಲಾಸ್ಟರ್ ಸಿ.ಆರ್.ಪಿ ಯಾದ ಕೃಷ್ಣ ಕುಮಾರ್ ಎನ್.ಇ ಯವರು”ವಿಷಯ ಗೊತ್ತಿದ್ದರೆ ಸಾಲದು ಆ ವಿಷಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು , ಗುರಿಯನ್ನು ಮುಟ್ಟಲು ಪ್ರಯತ್ನ ಪಡಬೇಕು, ನಿಮ್ಮ ಬಿಡುವಿನ ಸಮಯವನ್ನು ಒಳ್ಳೆಯ ರೀತಿಯಲ್ಲಿ ಸದುಪಯೋಗ ಪಡೆಸಿಕೊಳ್ಳಿ, ನಗು ಮುಖದೊಂದಿಗೆ ಕೆಲಸಗಳನ್ನು ನಿರ್ವಹಿಸಿ ಎಂದು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶೋಭಾ ಕೃಷ್ಣ ಕುಮಾರ್ ಹಾಗೂ ಶಿಕ್ಷಕ ರಕ್ಷಕ ಸಂಘದ ಸದಸ್ಯ ಧನಕೀರ್ತಿ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪಾಲ್ಗೊಂಡಿದ್ದರು.ಈ ಕಾರ್ಯಕ್ರಮವನ್ನು ಸಹ ಶಿಕ್ಷಕಿ ಅಶ್ಮೀತಾ ನಿರೂಪಿಸಿದರು.

Exit mobile version