ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

0

ಕೊಯ್ಯೂರು: ಕೊಯ್ಯೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜೂ.30ರಂದು ಆದೂರುಪೇರಲ್ ಶ್ರೀ ಪಂಚದುರ್ಗಾ ಸಹಕಾರಿ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಮಂಜು ನಾಯ್ಕ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಮಿತಾ, ಪಂಚಾಯತ್ ಸದಸ್ಯರುಗಳಾದ ಯಶವಂತ ಗೌಡ, ಲೋಕೇಶ್, ಗಿರೀಶ್, ಹರೀಶ್, ಇಸುಬು, ದಯಾಮಣಿ, ದಿವ್ಯ, ಚಂದ್ರಾವತಿ, ವಿಶಾಲಾಕ್ಷಿ, ಶಾರದಾ, ಹೇಮಾವತಿ, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಸ್ವಾಗತಿಸಿದರು.ಸಿಬ್ಬಂದಿ ವಸಂತ ಕಳೆದ ಗ್ರಾಮ ಸಭೆಯ ಅನುಪಾಲನಾ ವರದಿ ಮತ್ತು ಲೆಕ್ಕ ಪತ್ರ ವಾಚಿಸಿದರು.

ಸಿಬ್ಬಂದಿಗಳು ಸಹಕರಿಸಿದರು.ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here