ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಯೋಜನಾ ಪುಸ್ತಕ ಬಿಡುಗಡೆ

0

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯಲ್ಲಿ ಜೂ.30 ರಂದು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯಿಂದ ನೀಡಿದ 2023-24 ಸಾಲಿನ ಯೋಜನಾ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಯೋಜನಾ ಪುಸ್ತಕ ಬಿಡುಗಡೆಯನ್ನು ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಸುರೇಶ್ ಕುಮಾರ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವೀರುಪಾಕ್ಷಪ್ಪ, ಪ್ರಭಾರ ಆರೋಗ್ಯಧಿಕಾರಿ ಪ್ರಕಾಶ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಹಾಗೂ ಪದಾಧಿಕಾರಿಗಳು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಸಕರಾಗಿ 2ನೇ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜ ರವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಜಿ ಕಜೆ, ಜಿಲ್ಲಾ ಸ್ಕೌಟ್ ಆಯುಕ್ತ ರಾಮಶೇಷ ಶೆಟ್ಟಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ, ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಚ್ ಪದ್ಮ ಕುಮಾರ್, ನಿಕಟ ಪೂರ್ವ ಅಧ್ಯಕ್ಷ ವಿಠಲ್ ಶೆಟ್ಟಿ, ಕಾರ್ಯದರ್ಶಿ ಪ್ರಮೀಳಾ, ಕೋಶಾಧಿಕಾರಿ ಬೆಳ್ಳಿಯಪ್ಪ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಎಡಿಸಿ ಲೋಕೇಶ್ವರಿ ವಿನಯ ಚಂದ್ರ, ವಾಟರ್ ಜೆ ಪಿಂಟೋ, ಹಿರಿಯ ತರಬೇತುದಾರ ರಮೇಶ್ ಆಚಾರ್ಯ,ಸ್ಥಳೀಯ ಸಂಸ್ಥೆಯ ದಳ ನಾಯಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here