


ಉಜಿರೆ: ಸಮರ್ಪಣಾ ಭಾವನೆಯಿಂದ ಮತ್ತು ಕರ್ತವ್ಯ ನಿಷ್ಠೆಯಿಂದ ನನ್ನದೇ ಕೆಲಸ ಎಂದು ಪರಿಗಣಿಸಿಕೊಂಡು ಕೆಲಸವನ್ನು ಮಾಡಬೇಕು ನಿಮ್ಮ ಕಲಿಕೆ ನಿರಂತರವಾಗಿರಲಿ, ತಂತ್ರಜ್ಞಾನವು ಅಭಿವೃದ್ಧಿಯಾಗುವಾಗ ಅದನ್ನು ಅಳವಳಿಸಿಕೊಳ್ಳುವ ಪ್ರಯತ್ನ ಮಾಡಿ ಜೊತೆಗೆ ಸೃಜನಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ಎಸ್.ಡಿ.ಎಮ್. ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯನಿರ್ವಣಾಧಿಕಾರಿ ಪೂರಣ್ ವರ್ಮ ಅಭಿಪ್ರಾಯ ಪಟ್ಟರು.
ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಸಿಸಿ ಕ್ಯಾಮರಾ ಅಳವಡಿಸುವಿಕೆ ಮತ್ತು ಕಂಪ್ಯೂಟರ್ ಡಿಟಿಪಿ ತರಬೇತಿಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪು ಅಧ್ಯಕ್ಷ ಸ್ಥಾನ ವಹಿಸಿದ್ದರು.ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್ರ ಅತಿಥಿಗಳನ್ನು ಸ್ವಾಗತಿಸಿ, ತರಬೇತಿಯ ಹಿನ್ನೋಟವನ್ನು ನೀಡಿದರು.



ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರ್ವಹಿಸಿ, ಹಿರಿಯ ಉಪನ್ಯಾಸಕಿ ಅನಸೂಯ ಧನ್ಯವಾದವಿತ್ತರು.ಕೆಲವು ಶಿಬಿರಾರ್ಥಿಗಳು ಅನಿಸಿಕೆಯನ್ನು ವ್ಯಕ್ತಪಡಿಸಿದರು.ಸಿಸಿ ಕ್ಯಾಮರಾ ಅಳವಡಿಸುವಿಕೆ ಮತ್ತು ಕಂಪ್ಯೂಟರ್ ಡಿಟಿಪಿ ತರಬೇತಿಗಳಲ್ಲಿ ಒಟ್ಟು 33 ಶಿಬಿರಾರ್ಥಿಗಳು ಭಾಗವಹಿಸಿದರು.









