ಗೇರುಕಟ್ಟೆ : ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ನೂತನ ಕಟ್ಟಡ ಕ್ಷೀರ ಸಂಗಮ ಉದ್ಘಾಟನಾ ಸಮಾರಂಭ ಹಾಗೂ ಉನ್ನತೀಕರಿಸಿದ ಸಾಂದ್ರಶೀತಲೀಕರಣ ಘಟಕ ಉದ್ಘಾಟನಾ ಸಮಾರಂಭ ಜು.2 ರಂದು ನೂತನ ಕಟ್ಟಡ ಸಭಾಂಗಣದಲ್ಲಿ ಜರುಗಿತು.
ನೂತನ ಕಟ್ಟಡದ ಉದ್ಘಾಟನೆಯನ್ನು ಮಂಗಳೂರು ದ.ಕ.ಸ. ಹಾಲು ಒಕ್ಕೂಟ (ನಿ.)ಅಧ್ಯಕ್ಷ ಸುಚರಿತ ಶೆಟ್ಟಿ ನೆರವೇರಿಸಿದರು.
ಮಂಗಳೂರು ದ.ಕ.ಸ.ಹಾಲು ಒಕ್ಕೂಟ ಎಸ್.ಬಿ.ಜಯರಾಮ ರೈ ಬಳಜ್ಜ ಕಚೇರಿ ಉದ್ಘಾಟನೆಯನ್ನು ಮಾಡಿದರು.
ಮಂಗಳೂರು ನಿರ್ದೇಶಕ ದ.ಕ.ಸ.ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ ಸಭಾಭವನ ಉದ್ಘಾಟನೆ ಮಾಡಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸುವ ಮೂಲಕ ಸಭಾ ಕಾರ್ಯಕ್ರಮ ಚಾಲನೆ ನೀಡಿ ಶುಭ ಹಾರೈಸಿದರು.
ಕರ್ನಾಟಕ ಸರಕಾರ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್ ಸಂಘದ ಮಾಜಿ ಅಧ್ಯಕ್ಷರನ್ನು ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಿದರು.ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಜನಾರ್ದನ ಗೌಡ ಸಭಾ ಅಧ್ಯಕ್ಷತೆ ವಹಿಸಿದ್ದರು.
ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗುಲಾಬಿ ಪಿ.ಸಂಘದ ಸಂಕ್ಷಿಪ್ತ ವರದಿಯನ್ನು ಸಭೆಯಲ್ಲಿ ಮಂಡಿಸಿದರು.
ಈ ಸಂದರ್ಭದಲ್ಲಿ ಕಳಿಯ ಗ್ರಾಮ ಪಂಚಾಯತು ಅಧ್ಯಕ್ಷೆ ಸುಭಾಷಿಣಿ ಕೆ.ಜನಾರ್ದನ ಗೌಡ, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ವಸಂತ ಮಜಲು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಸುರೇಂದ್ರ ಕುಮಾರ್, ಮಂಗಳೂರು ದ.ಕ.ಸ.ಹಾಲು ಒಕ್ಕೂಟ ಪ್ರದಾನ ವ್ಯವಸ್ಥಾಪಕ ನಿರ್ದೇಶಕರಾದ ಡಿ.ಅಶೋಕ,ಮಂಗಳೂರು ಪ್ರಧಾನ ವ್ಯವಸ್ಥಾಪಕರಾದ ನಿತ್ಯಾನಂದ ಭಕ್ತ,ಉಪ ವ್ಯವಸ್ಥಾಪಕ ಡಾ| ಸತೀಶ್ ರಾವ್, ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ,ಕಳಿಯ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ದ.ಕ.ಸ. ಹಾಲು ಒಕ್ಕೂಟದ ಪಶುವೈಧ್ಯಾಧಿಕಾರಿ, ವಿಸ್ತರಣಾಧಿಕಾರಿ ರಾಜೇಶ್ ಪಿ.ಕಾಮತ್,ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ವಿ.ಪ್ರತಿಮಾ,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಕುಶಲಾವತಿ,ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕುಸುಮ ಎನ್.ಬಂಗೇರ,ಹಾಗೂ ಪಂಚಾಯತು ಸದಸ್ಯರು, ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು,ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಬಾಗವಹಿಸಿದರು.