ಮುಂಡಾಜೆ: ಮುಂಡಾಜೆ ಪದವಿಪೂರ್ವ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2023-24ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಉದ್ಘಾಟನೆ ನೆರವೇರಿಸಿದ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ರೊನಾಲ್ಡ್ ಪ್ರವೀಣ್ ಕೊರೆಯರವರು ಎನ್ಎಸ್ಎಸ್ ಸ್ವಯಂಸೇವಕರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ ಮಾತನಾಡುತ್ತಾ, ‘ಜೀವನದಲ್ಲಿ ಸಕಾರಾತ್ಮಕ ಆಲೋಚನೆಯೊಂದಿಗೆ ಶಿಸ್ತನ್ನು ಅಳವಡಿಸಿಕೊಳ್ಳಿ. ತಮ್ಮ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಅವಕಾಶಗಳ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸನ್ನು ಗಳಿಸಬೇಕು’ ಎಂದರು.
ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರರವರು ಶುಭಹಾರೈಸಿದರು.
ಕಾಲೇಜಿನ ಪ್ರಾಂಶುಪಾಲೆ ಜಾಲಿ ಓ.ಎ ಅಧ್ಯಕ್ಷತೆ ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಘಟಕದ ಕಾರ್ಯಕ್ರಮಾಧಿಕಾರಿ ನಮಿತಾ ಕೆ ಆರ್ ಸ್ವಾಗತಿಸಿದರು.ಕುಮಾರಿ ಪಲ್ಲವಿ ನಿರೂಪಿಸಿ, ಯೋಗೀಶ ಧನ್ಯವಾದಗೈದರು.