ಉಜಿರೆ: ಎಸ್.ಡಿ.ಎಂ ಟ್ರಸ್ಟ್ ವಿದ್ಯಾರ್ಥಿ ವೇತನ ವಿತರಣೆ

0

ಉಜಿರೆ: ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಟ್ರಸ್ಟ್‌ನ ವಿದ್ಯಾರ್ಥಿ ವೇತನವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.

ಮುಖ್ಯ ಅಥಿತಿಯಾಗಿ ಆಗಮಿಸಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಈ ವಿದ್ಯಾರ್ಥಿ ವೇತನದ ಪರಿಕಲ್ಪನೆಯು ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿಗೆ ಸಾಕ್ಷಿಯಾಗಿದ್ದು ಪ್ರಸ್ತುತ ವರ್ಷದಲ್ಲಿ 1ಕೋಟಿ 15 ಲಕ್ಷ ರುಪಾಯಿಗಳನ್ನು ಈ ರೂಪದಲ್ಲಿ ನೀಡಲಾಗಿದೆ.ವಿದ್ಯಾಭ್ಯಾಸದ ಹಂತದಲ್ಲಿ ಎದುರಾಗುವ ಆರ್ಥಿಕ ಅಡಚಣೆಯನ್ನು ಎದುರಿಸಲು ನೆರವಾಗಲಿ ಎಂದು ಆಶಿಸಿದರು.ಕರ್ನಾಟಕದಾದ್ಯಂತ ವಿವಿಧಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಈ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಫಲಾನುಭವಿಗಳಾಗಿರುತ್ತಾರೆ.
ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ್‌ ಹೆಗಡೆ ಸ್ವಾಗತಿಸಿ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್‌ಕುಮಾರ್ ವಂದಿಸುತ್ತಾ ಕಾಲೇಜಿನ ವಿದ್ಯಾರ್ಥಿಗಳ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಪಿಜಿ ಕಾಲೇಜಿನ ಡೀನ್ ಪ್ರೊ. ವಿಶ್ವನಾಥ್‌ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಗಿರೀಶ್‌ಕುಮಾರ್‌ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here