ಉಜಿರೆ: ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಟ್ರಸ್ಟ್‌ನ ವಿದ್ಯಾರ್ಥಿ ವೇತನವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿತರಿಸಲಾಯಿತು.
ಮುಖ್ಯ ಅಥಿತಿಯಾಗಿ ಆಗಮಿಸಿದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಈ ವಿದ್ಯಾರ್ಥಿ ವೇತನದ ಪರಿಕಲ್ಪನೆಯು ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿಗೆ ಸಾಕ್ಷಿಯಾಗಿದ್ದು ಪ್ರಸ್ತುತ ವರ್ಷದಲ್ಲಿ 1ಕೋಟಿ 15 ಲಕ್ಷ ರುಪಾಯಿಗಳನ್ನು ಈ ರೂಪದಲ್ಲಿ ನೀಡಲಾಗಿದೆ.ವಿದ್ಯಾಭ್ಯಾಸದ ಹಂತದಲ್ಲಿ ಎದುರಾಗುವ ಆರ್ಥಿಕ ಅಡಚಣೆಯನ್ನು ಎದುರಿಸಲು ನೆರವಾಗಲಿ ಎಂದು ಆಶಿಸಿದರು.ಕರ್ನಾಟಕದಾದ್ಯಂತ ವಿವಿಧಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುತ್ತಿರುವ ಈ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದ ಫಲಾನುಭವಿಗಳಾಗಿರುತ್ತಾರೆ.
ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎ.ಕುಮಾರ್ ಹೆಗಡೆ ಸ್ವಾಗತಿಸಿ, ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್‌ಕುಮಾರ್ ವಂದಿಸುತ್ತಾ ಕಾಲೇಜಿನ ವಿದ್ಯಾರ್ಥಿಗಳ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ಪಿಜಿ ಕಾಲೇಜಿನ ಡೀನ್ ಪ್ರೊ. ವಿಶ್ವನಾಥ್‌ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಗಿರೀಶ್‌ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.