ಸಾಧಕರಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಅಭಿನಂದನೆ

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಪ್ರೌಢಶಾಲೆಗಳ ಹತ್ತನೆಯ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾI ಸತೀಶ್ಚಂದ್ರ ಎಸ್. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.

ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅದ್ಯಕ್ಷರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸ್ಮರಣಿಕೆ ನೀಡಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ರೀ ಡಿ.ಹರ್ಷೇಂದ್ರ ಕುಮಾರ್‌ರವರು ವಿದ್ಯಾರ್ಥಿಗಳು ಉತ್ತಮವಾದ ಗುರಿಗಳನ್ನಿಟ್ಟುಕೊಂಡು ಶೃದ್ಧೆ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮಾಡುವಂತೆ ತಿಳಿಸಿ ಶುಭ ಹಾರೈಸಿದರು.

ವಿದ್ಯಾರ್ಥಿಗಳ ಜೊತೆ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ಧರು.ಸಾಧಕ ವಿದ್ಯಾರ್ಥಿಗಳ ವಿವರವನ್ನು ಬಿ.ಸೋಮಶೇಖರ ಶೆಟ್ಟಿ ನೀಡಿದರು. ಮನಮೋಹನ ನಾಯಕ
ವಂದಿಸಿದರು.

LEAVE A REPLY

Please enter your comment!
Please enter your name here