ಸುಲ್ಕೇರಿಮೊಗ್ರು: ಸ.ಹಿ.ಪ್ರಾ.ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

0

ಅಳದಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರು ಇಲ್ಲಿನ ಎಲ್ಲ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕವನ್ನು ಹಾಗೂ ಪರಿಸರ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನವನ್ನು ಶಾಲೆಯ ಹಳೆವಿದ್ಯಾರ್ಥಿ ಪ್ರಧೀಪ್ ಕುಲಾಲ್ ಕೊಡುಗೆಯಾಗಿ ನೀಡಿದರು.ಇದನ್ನು ಶಾಲಾ ಕಾರ್ಯಕ್ರಮದಲ್ಲಿ ಪ್ರದೀಪ್ ಕುಲಾಲ್ ಇವರ ತಂದೆ ಗೋಪಾಲ ಮೂಲ್ಯ ಅಂಬಡೆದಡಿ ಇವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೇವತಿ, ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ಭಟ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಮತ್ತು ಪೊಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here