


ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.
ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.4ರಂದು ನಡೆದ ಶಾಲಾ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘಗಳ ಉದ್ಘಾಟಕರಾಗಿ ಆಗಮಿಸಿ ಮಾತನಾಡಿದರು.



ವೇದಿಕೆಯಲ್ಲಿ ಎಸ್.ಡಿ.ಎಮ್ ಮಾಹಿತಿ ತಂತ್ರಜ್ಞಾನ ಮುಖ್ಯ ಕಾರ್ಯನಿರ್ವಾಹಕ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಏಂಜಲ್ ಮತ್ತು ಹೆನಿನ್ ನಿರೂಪಣೆ ಮಾಡಿ ಶ್ರೇಯ ಧನ್ಯವಾದ ಸಮರ್ಪಿಸಿದರು.









