Site icon Suddi Belthangady

ಧರ್ಮಸ್ಥಳ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜು.5ರಂದು ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯ ಮೋನಪ್ಪ ಗೌಡ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಜಯಕೀರ್ತಿ ಜೈನ್ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್, ಪಂಚಾಯತ್ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ ಕೆ.ಸ್ವಾಗತಿಸಿದರು.ಸಿಬ್ಬಂದಿ ಡಾ. ದೇವಿಪ್ರಸಾದ್ ಬೊಲ್ಮ ಕಳೆದ ಗ್ರಾಮ ಸಭೆಯ ಅನುಪಾಲನಾ ವರದಿಯನ್ನು ಮತ್ತು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಪ್ರಮೀಳಾ ವಾಚಿಸಿದರು.ಸಿಬ್ಬಂದಿಗಳು ಸಹಕರಿಸಿದರು.

ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

Exit mobile version