ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

0

ಮಡಂತ್ಯಾರು: ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ 2023-24ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನೆ ಕಾರ್ಯಕ್ರಮವು 04-07-2023 ರಂದು  ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಸ್ವಾಗತ ನೃತ್ಯದೊಂದಿಗೆ ಪ್ರಾರಂಭವಾಯಿತು.ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್  ರವರು ವಹಿಸಿದ್ದರು.ಅವರು  ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿ,  ನಾಯಕನಾದವನು ತನಗಾಗಿ ಬದುಕದೆ ಬೇರೆಯವರಿಗಾಗಿ ಬದುಕಿದಾಗ ಜೀವನ ಸಾರ್ಥಕ ಎಂದು ಹೇಳಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹೋಲಿ ರೆಡಿಮಾರ್ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಮುಖ್ಯೋಪಾಧ್ಯಾಯವರಾದ ವಂ|ಸ್ವಾ| ಕ್ಲಿಫರ್ಡ್ ಪಿಂಟೋರವರು ಆಗಮಿಸಿ ವಿದ್ಯಾರ್ಥಿ ನಾಯಕರುಗಳು ಶಾಲಾ ನಿಯಮಗಳನ್ನು ಪಾಲಿಸಿ ನಂತರ ಬೇರೆಯವರಿಗೆ ಮಾದರಿಯಾಗಬೇಕು ಎಂದು ಹೇಳಿ, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಇದೇ ಸಂದರ್ಭದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ಶ್ರೀ ವಿರೂಪಾಕ್ಷ , ತಾಲೂಕು ಶಿಕ್ಷಣ ಸಂಯೋಜಕರಾದ  ಶ್ರೀ ಸಿದ್ದಲಿಂಗ ಸ್ವಾಮಿ, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನ ರವರು ಆಗಮಿಸಿ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ಗಳಿಸಿರುವುದಕ್ಕಾಗಿ ಶಾಲಾ ಮುಖ್ಯೋಪಾಧ್ಯಾಯರಿಗೆ, ಶಿಕ್ಷಕ- ಶಿಕ್ಷಕೇತರ ವೃಂದದವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಅದೇ ರೀತಿ ಅತ್ಯುನ್ನತ ಅಂಕಗಳನ್ನು ಗಳಿಸಿದ ಅನ್ವಿಕ್ ಸೇರ ಮತ್ತು ಎರಲ್ ಡಯಾಸ್ ಅವರನ್ನು ಅಭಿನಂದಿಸಿದರು.ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಪಥ ಸಂಚಲನದ ಮೂಲಕ ವೇದಿಕೆಗೆ ಆಗಮಿಸಿ, ತಮ್ಮ ನಾಯಕತ್ವದ ಪದವಿಯನ್ನು ಗಣ್ಯ ವ್ಯಕ್ತಿಗಳಿಂದ ಪಡೆದು, ಪ್ರತಿಜ್ಞೆಯನ್ನು ಸ್ವೀಕರಿಸಿದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಶುಭ ಕೋರಿದರು.ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಲೇರಿಯನ್ ಸೇರಾವೊ,2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರು,ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಹಶಿಕ್ಷಕರಾದ ಶ್ರೀ ಜೆರಾಲ್ಡ್ ಡಿಸೋಜ  ಹಾಗೂ ಸಹಶಿಕ್ಷಕಿಯಾದ ಶ್ರೀಮತಿ ಐಡಾರವರು ತರಬೇತಿಯನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು.ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ನೇವಿಲ್ ಹಾಗೂ ಅಹಿಸ್ಮ ರವರು ನಿರೂಪಿಸಿ, ಚರಿಷ್ಮರವರು ಸ್ವಾಗತಿಸಿ, ತೃಪ್ತಿರವರು ವಂದಿಸಿದರು.

LEAVE A REPLY

Please enter your comment!
Please enter your name here