Site icon Suddi Belthangady

ಪ್ರತಿ ತಿಂಗಳ ಮೂರನೇ ಶನಿವಾರ ಮಕ್ಕಳಿಗೆ ಬ್ಯಾಗ್‌ ರಹಿತ ದಿನ ಆಚರಣೆ

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ವಾರದಲ್ಲಿ ಒಂದು ದಿನ ಬ್ಯಾಗ್ ರಹಿತವಾಗಿ ಖುಷಿಯಿಂದ ಕಲಿಯುವ ವಾತಾವರಣ ನಿರ್ಮಿಸುವ ಉದ್ದೇಶದಿಂದ ರಾಜ್ಯದ ಶಾಲೆಗಳಲ್ಲಿ ಪ್ರತಿ ತಿಂಗಳ 3ನೇ ಶನಿವಾರವನ್ನು ‘ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮ ನಡೆಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಇತ್ತೀಚೆಗಷ್ಟೇ ಶಾಲಾ ಬ್ಯಾಗ್ ತೂಕ ಇಳಿಸಿ ಆದೇಶ ಹೊರಡಿಸಿದ್ದ ಶಿಕ್ಷಣ ಇಲಾಖೆ, ಇದೀಗ ಸಂಭ್ರಮ ಶನಿವಾರ ಆದೇಶ ಹೊರಡಿಸಿದೆ.

ಮಕ್ಕಳಿಗೆ ಸಂತಸದಾಯಕ ಕಲಿಕೆಯನ್ನು ನೀಡಲು ಹಾಗೂ ಮಕ್ಕಳಿಗೆ ಪಠ್ಯವನ್ನು ಉಲ್ಲಾಸದಿಂದ ಹೊರೆಯಾಗಿಸದೆ ಕಲಿಯುವಂತೆ ಮಾಡುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ಶನಿವಾರದಂದು ಬ್ಯಾಗ್ ರಹಿತ ದಿನವೆಂದು ಆಚರಿಸುವಂತೆ ಆದೇಶಿಸಲಾಗಿದೆ.

2023-24 ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರ ಶಾಲಾ ಹಂತದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವಂತೆ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಸೂಚನೆ ನೀಡಿದೆ.

ಮಕ್ಕಳ ಸಂತಸದಾಯಕ ಕಲಿಕೆ ಮತ್ತು ಪಠ್ಯದ ಹೊರೆ ಇಳಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ.

Exit mobile version