

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜು.7ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಳ್ತಂಗಡಿ ಜಿ. ಪ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲ ಸಂಗೋಪನಾ ಇಂಜೀನಿಯರ್ ನಿತಿನ್ ಮಾರ್ಗದರ್ಶ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಎಳ್ಳುಗದ್ದೆ, ಪಂಚಾಯತ್ ಸದಸ್ಯರುಗಳು ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಕ್ಷ್ಮಿಬಾಯಿ ಕಳೆದ ಗ್ರಾಮ ಸಭೆಯ ಅನುಪಾಲನಾ ವರದಿಯನ್ನು ವಾಚಿಸಿದರು.
ಕಾರ್ಯದರ್ಶಿ ಮೋಹನ್ ಬಂಗೇರ ಸ್ವಾಗತಿಸಿ ಲೆಕ್ಕ ಪತ್ರ ಮಂಡಿಸಿದರು.ಸಿಬ್ಬಂದಿಗಳು ಸಹಕರಿಸಿದರು. ಸಭೆಯಲ್ಲಿ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಓದಿ ಅನುಮೋದನೆ ಪಡೆಯಲಾಯಿತು.ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.