Site icon Suddi Belthangady

ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಧರ್ಮಸ್ಥಳ: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದು, ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಾಜಿ ಸಚಿವ ಅಭಯಚಂದ್ರ ಜೈನ್, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೆ. ಶೈಲೇಶ್ ಕುಮಾರ್, ರಂಜನ್ ಜಿ.ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಗುತ್ತಿಗೆದಾರ ನಾಗೇಶ್ ಕುಮಾರ್ ಉಪಸ್ಥಿತರಿದ್ದರು.

Exit mobile version