Site icon Suddi Belthangady

ಬ್ಲಾಕ್ ಕಾಂಗ್ರೆಸ್ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಂವಾದ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕರ್ತರ ಸಭೆ ಜು.8ರಂದು ಶ್ರೀ ಗುರುನಾರಾಯಣ ಸಂಕೀರ್ಣದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಭೆ ನಡೆಯಿತು.


ಈ ಸಭೆಯಲ್ಲಿ ನೂತನ ಸಚಿವರಾಗಿ ಆಯ್ಕೆಯಾದ ದಿನೇಶ್ ಗುಂಡೂರಾವ್ ರವರನ್ನು ಬ್ಲಾಕ್ ಕಾಂಗ್ರೆಸ್, ಕ್ರಿಶ್ಚಿಯನ್ ಕ್ಯಾಥೊಲಿಕ್ ಸಮುದಾಯ ಸಮಿತಿ, ಮಡಂತ್ಯಾರು ಕೃಷಿಪತ್ತಿನ ಸಹಕಾರಿ ಸಂಘ ಮತ್ತು ಮಹಿಳಾ ಘಟಕದ ವತಿಯಿಂದ ಸನ್ಮಾನಿಸಲಾಯಿತು.


ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಹಿಸಿದ್ದರು.ಮಾಜಿ ಶಾಸಕ ಕೆ.ವಸಂತ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಾಜಿ ಸಚಿವ ಕೆ.ಗಂಗಾಧರ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ.ಶೈಲೇಶ್ ಕುಮಾರ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್.ಜಿ ಗೌಡ, ಕೆಪಿಸಿಸಿ ಸದಸ್ಯ ಕೇಶವ ಗೌಡ, ಟಿ.ಎಮ್.ಶಾಹಿದ್ ತೆಕ್ಕಿಲ್, ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಜಿಲ್ಲಾ ಕಾರ್ಯದರ್ಶಿ ಎ.ಸಿ.ಮ್ಯಾಥ್ಯೂ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ, ವಿವಿಧ ಘಟಕದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version