Site icon Suddi Belthangady

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ- ಪುರಾಣದಿಂದ ಆಧುನಿಕ ವಿಜ್ಞಾನದವರೆಗೆ ಪ.ರಾಮಕೃಷ್ಣ ಶಾಸ್ತ್ರಿಯವರು ಅಧ್ಯಯನ ಮಾಡಿದ್ದಾರೆ ಡಾ.ಡಿ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ : ರಾಜ್ಯದ ವಿವಿಧ ಪತ್ರಿಕೆಗಳಲ್ಲಿ 12ಸಾವಿರಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ, 104 ಪುಸ್ತಕಗಳನ್ನು ಹೊರತಂದ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಸಪ್ತತಿ ಪ್ರಯುಕ್ತ ಸಾರ್ವಜನಿಕ ಅಭಿನಂದನ ಸಮಾರಂಭ ಜು.8ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು.

ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿ ಪುರಾಣದಿಂದ ಆಧುನಿಕ ವಿಜ್ಞಾನದವರೆಗೆ ಪ.ರಾಮಕೃಷ್ಣ ಶಾಸ್ತ್ರಿಯವರು ಅಧ್ಯಯನ ಮಾಡಿದ್ದಾರೆ ಎಂದರು.

ಅಧ್ಯಕ್ಷತೆಯನ್ನು ಜನಪದ ವಿವಿ ಹಾವೇರಿಯ ವಿಶ್ರಾಂತ ಕುಲಪತಿ ಡಾ| ಕೆ. ಚಿನ್ನಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್, ಪಾವಂಜೆ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮೊಕೇಸರ ಎಂ. ಶಶೀಂದ್ರ ಕುಮಾರ್, ಅಭಿನಂದಿತರಾಗುವ ಪ.ರಾಮಕೃಷ್ಣ ಶಾಸ್ತಿಮಚ್ಚಿನ, ಅವರ ಪತ್ನಿ ಶಾರದಾ ಆರ್. ಶಾಶ್ಟ್ರಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಲಕ್ಷ್ಮೀ ಮಚ್ಚಿನ ಬರೆದ ಬದುಕು ಬರಹ ಬವಣೆ: ಪ. ರಾಮಕೃಷ್ಣ ಶಾಸ್ತ್ರಿಹೆಜ್ಜೆ ಗುರುತುಗಳು, ಪ. ರಾಮಕೃಷ್ಣ ಶಾಸ್ತ್ರಿ ಅವರು ಬರೆದ – ಮಳೆ ಮಳೆ (ಲೇಖನಗಳ – ಸಂಗ್ರಹ), ನಟನ ಮನೋಹರಿ (ಕಾದಂಬರಿ), ರೋಚಕ ಲೋಕ (ತರಂಗ ಲೇಖನಗಳ ಸಂಗ್ರಹ), ಪ್ರಪಂಚದ ಸೋಜಿಗಗಳು (ತರಂಗ ಲೇಖನಗಳ ಸಂಗ್ರಹ) ಪುಸ್ತಕಗಳು ಬಿಡುಗಡೆ ಮಾಡಲಾಯಿತು.

ಕುರಿಯ ವಿಠಲ ಶಾಸ್ತಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಚಾಲಕರು ಎನ್. ಅಶೋಕ ಭಟ್ ಉಜಿರೆ ಅಭಿನಂದನಾ ಭಾಷಣ ಮಾಡಿದರು.

ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನಾ ಸಮಿತಿ ಸಂಚಾಲಕ ಸಂಪತ್ ಬಿ. ಸುವರ್ಣ ಸ್ವಾಗತಿಸಿದರು. ನ್ಯಾಯವಾದಿ ಧನಂಜಯ್ ರಾವ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಸ್ತ್ರಿಯವರ ಒಡನಾಡಿಗಳು, ಆತ್ಮೀಯರು, ಬಂಧುಗಳು, ಸಾಹಿತ್ಯದ ಅಭಿಮಾನಿಗಳು ಉಪಸ್ಥಿತರಿದ್ದರು

Exit mobile version