ಬೆಳ್ತಂಗಡಿಯಲ್ಲಿ ಜು.8 ರಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರಾವ್ ರವರ ಜನತಾ ದರ್ಶನ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮಂಜೂರು ಮಾಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ. ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕಾರ್ಯಕಾರಿ ಸಮಿತಿ ಸದಸ್ಯ ಮನೋಹರ ಕುಮಾರ್, ಇಳಂತಿಲ, ಸಂತೋಷ್ ಕುಮಾರ್ ಮತ್ತು ಕೇಶವ ಪಿ ಬೆಳಾಲು ಉಪಸ್ಥಿತರಿದ್ದರು.