ದಶಲಕ್ಷ ಗಿಡಗಳ ನಾಟಿ ಮತ್ತು ಕೋಟಿ ವೃಕ್ಷ ಆಂದೋಲನ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ- ಶ್ರೀ ಕ್ಷೇತ್ರ ಧರ್ಮಾಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಚಾಲನೆ

0

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಧರ್ಮಸ್ಥಳ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ಪುತ್ತೂರು ಉಪ ವಿಭಾಗ, ಉಪ್ಪಿನಂಗಡಿ ವಲಯ ಇದರ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ” ದಶಲಕ್ಷ ಗಿಡಗಳ ನಾಟಿ ಮತ್ತು ಕರ್ನಾಟಕ ಸರ್ಕಾರದ ಅರಣ್ಯ ಇಲಾಖೆಯ “ಕೋಟಿ ವೃಕ್ಷ ಆಂದೋಲನಕ್ಕೆ ಬಳಿಕ ನಡೆದ ಸಭಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಜು.9ರಂದು ರುದ್ರಗಿರಿ ಮೃತ್ಯುಂಜಯ ದೇವಸ್ಥಾನ ತಣ್ಣೀರುಪಂತದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆ ಅವರು ತಣ್ಣೀರುಪಂತದ ಪುರುಷರ ಮಜಲು ಮೀಸಲು ಅರಣ್ಯ ಪ್ರದೇಶದಲ್ಲಿ ಚಾಲನೆ ನೀಡಿ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ವಿಧಾನಸಭಾ ಸದಸ್ಯ ಪ್ರತಾಪ್ ಸಿಂಹ ನಾಯಕ್, ಶ್ರೀ.ಕ್ಷೇ.ಧ.ಗ್ರಾ.ಯೋ.ಧರ್ಮಸ್ಥಳದ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್.ಮಂಜುನಾಥ್, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ., ಶ್ರೀ.ಕ್ಷೇ.ಧ.ಗ್ರಾ.ಯೋ.ಧರ್ಮಸ್ಥಳದ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಫಾತಿಮಾ ಇಶ್ರತ್, ಬೆಳ್ತಂಗಡಿ ಜನಜಾಗೃತಿ ವೇದಿಕೆ ಅಧ್ಯಕ್ಷೆ ಶಾರದ ಆರ್.ರೈ, ಪ್ರಗತಿಬಂಧು, ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸದಾನಂದ ಬಂಗೇರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯ್ ಸ್,ಉಡುಪಿ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್. ದ.ಕ. ಯೋಜನಾ ನಿರ್ದೇಶಕ ಮಹಾಬಲ್ ಕುಲಾಲ್ , ಜನಜಾಗೃತಿ ವಲಯಾಧ್ಯಕ್ಷ ಪ್ರಭಾಕರ ಗೌಡ ಪೊಸಂದೋಡಿ , ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here