Site icon Suddi Belthangady

ಚಾರ್ಮಾಡಿ ಘಾಟ್‌ನಲ್ಲಿ ಬೇಕಾಬಿಟ್ಟಿ ಗಾಡಿ ನಿಲ್ಲಿಸಿ ಡ್ಯಾನ್ಸ್ ಮಾಡಿದ ಪ್ರವಾಸಿಗರು: ಟ್ರಾಫಿಕ್ ಜಾಮ್, ಪ್ರಯಾಣಿಕರ ಆಕ್ರೋಶ

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರು ರಸ್ತೆ ಮಧ್ಯೆ ಬೇಕಾಬಿಟ್ಟಿ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಅಪಾಯದಿಂದ ಕೂಡಿದ ರಸ್ತೆಯಲ್ಲಿ ಪ್ರವಾಸಿಗರು ಅಡ್ಡಾದಿಡ್ಡಿ ವಾಹನ ನಿಲ್ಲಿಸಿ ಮೋಜು ಮಸ್ತಿ ಮಾಡಿದ್ದು ಇದರಿಂದ ಟ್ರಾಫಿಕ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ಚಾರ್ಮಾಡಿ ಘಾಟಿಯಲ್ಲಿ ದಟ್ಟವಾದ ಮಂಜು ಇದ್ದು, ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣಿಸುವುದಿಲ್ಲ.ಅಲ್ಲದೆ, ರಸ್ತೆಗಳು ತಿರುವು ಮುರುವಿನಿಂದ ಕೂಡಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ.

ಇದರ ನಡುವೆ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು ಇಂತಹ ಪುಂಡಾಟಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Exit mobile version