Site icon Suddi Belthangady

ಮಡಂತ್ಯಾರು:ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು 11-07-2023 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.

ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್, ಶಾಲಾ ಮುಖೋಪಾಧ್ಯಾಯವರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಸಹಶಿಕ್ಷಕರಾದ ಶ್ರೀ ವಲೇರಿಯನ್ ಡಿಸೋಜ, ಶ್ರೀಮತಿ ಅನಿತಾ ಡಿಸೋಜ ಹಾಗೂ ವಿದ್ಯಾರ್ಥಿಗಳು ಗಿಡವನ್ನು ನೆಟ್ಟು ಅದಕ್ಕೆ ನೀರು ಎರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವಿದ್ಯಾರ್ಥಿನಿಯಾದ ಕುಮಾರಿ ಪ್ರಾಪ್ತಿರವರು ವನಮಹೋತ್ಸವದ ಮಹತ್ವದ ಬಗ್ಗೆ ವಿವರಣೆ ನೀಡಿದರು. ವಿದ್ಯಾರ್ಥಿಗಳು ಹಾಡು, ನೃತ್ಯ, ನಾಟಕದ ಮೂಲಕ ವನಮಹೋತ್ಸವದ ಮಹತ್ವವನ್ನು ಪ್ರದರ್ಶಿಸಿದರು.

ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಪ್ರಕೃತಿಯನ್ನು ಪ್ರೀತಿಸಿ, ಗಿಡ-ಮರಗಳನ್ನು ಬೆಳೆಸಿ, ಪ್ರಕೃತಿಯನ್ನು ಉಳಿಸಿ, ಪ್ರಕೃತಿ ಪ್ರೇಮಿಯಾಗಲು ವಿದ್ಯಾರ್ಥಿಗಳಿಗೆ ಕರೆಯಿತ್ತರು.

ಬಳಿಕ ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಂಚಲಾಯಿತು. ವಿದ್ಯಾರ್ಥಿನಿಯರಾದ ಕುಮಾರಿ ಸಾನಿಕ ಕಾರ್ಯಕ್ರಮವನ್ನು ನಿರೂಪಿಸಿ, ಕುಮಾರಿ ಬಿಂದು ಸ್ವಾಗತಿಸಿ, ಕುಮಾರಿ ಕ್ಲಿಯೊನ ಧನ್ಯವಾದವನ್ನು ಸಮರ್ಪಿಸಿದರು.ಈ ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.

Exit mobile version