ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

0

ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭವು ಜು.12 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಅಲೆಕ್ಸ್ ಐವನ್ ಸಿಕ್ವೇರಾ ರವರು ಸ್ವಯಂ ಸೇವಕರನ್ನು ಉದ್ದೇಶಿಸಿ ಎನ್ ಎಸ್ ಎಸ್ ನ ಮಹತ್ವ ತಿಳಿಹೇಳಿದರು.

ಮುಖ್ಯ ಅತಿಥಿಗಳಾಗಿ ಪ್ರೊ.ಈಶ್ವರ್ ಗೌಡ, ವಾಣಿಜ್ಯ ವಿಭಾಗದ ಮುಖ್ಯಸ್ಥರು ಆಗಮಿಸಿ ರಾಷ್ಟ್ರೀಯ ಸೇವಾ ಯೋಜನೆಯ ಕುರಿತು ಸ್ವಯಂ ಸೇವಕರಿಗೆ ಅರಿವು ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಗಳಾದ ಪ್ರಶಾಂತ್ ಎಮ್., ಜೀವಾ ವಿ.ಸಿ., ರಕ್ಷಿತಾ, ನಾಯಕರಾದ ಪವನ್ ಕುಮಾರ್, ಮೋವಿನ್ ರೇಗೊ, ಅನೀಶ್, ನಾಯಕಿಯರಾದ ಎಸ್.ಪಿ. ತೇಜಸ್ವಿ, ಸಿಂಥಿಯಾ ರೊಡ್ರಿಗಸ್, ಅಂಕಿತ ರವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಜೀವಾ ವಿ.ಸಿರವರು ಸ್ವಾಗತಿಸಿ, ನಾಯಕನಾದ ಅನೀಶ್ ವಂದಿಸಿದರು.ಸ್ವಯಂ ಸೇವಕಿ ಸೌಂದರ್ಯ ಎ. ಪಿ.ನಿರೂಪಿಸಿದರು.

LEAVE A REPLY

Please enter your comment!
Please enter your name here