‘ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ’- ಸಿಎಂ ಸಿದ್ದರಾಮಯ್ಯರಿಗೆ ಡಾ|ಡಿ.ವೀರೇಂದ್ರ ಹೆಗ್ಗಡೆಯವರಿಂದ ಮೆಚ್ಚುಗೆ ಪತ್ರ

0

ಧರ್ಮಸ್ಥಳ: ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯರೂ ಆಗಿರುವ ಡಾ|ಡಿ.ವೀರೇಂದ್ರ ಹೆಗ್ಗಡೆಯವರು ಅಭಿನಂದಿಸಿದ್ದು ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ ಎಂದು ಮೆಚ್ಚುಗೆ ಸೂಚಿಸಿ ಪತ್ರ ಬರೆದಿದ್ದು ಮುಖ್ಯಮಂತ್ರಿಯವರು ಇದಕ್ಕೆ ಧನ್ಯವಾದ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಡಾ|ಡಿ.ವೀರೇಂದ್ರ ಹೆಗ್ಗಡೆಯವರು, ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು.ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ.ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ.ಎಲ್ಲರ ಪರವಾಗಿ ಅಭಿನಂದನೆಗಳು.ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷೆ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ’ ಎಂದು ಹಾರೈಸಿದರು.

LEAVE A REPLY

Please enter your comment!
Please enter your name here