ಬೆಳ್ತಂಗಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ(ರಿ) ಬೆಳ್ತಂಗಡಿ ತಾಲೂಕು ಸಮಿತಿಯಿಂದ ಅತಿಥಿ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು, ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಲಿಖಿತ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಗೌರವಾಧ್ಯಕ್ಷ ಸಂದೀಪ್ ಎಸ್ ನೀರಲ್ಕೆ ಅರ್ವ, ಅಧ್ಯಕ್ಷ ಹರೀಶ್ ಗಾಂಧಿನಗರ, ಕೋಶಾಧಿಕಾರಿ ವೇದಾವತಿ ಮತ್ತು ಸಮಿತಿ ಸದಸ್ಯರು ಹಾಜರಿದ್ದರು.