ಭಾರತದಿಂದ ಚಂದ್ರನ ಅಂಗಳಕ್ಕೆ ಚಂದ್ರಯಾನ-3 ನೌಕೆ ಯಶಸ್ವಿ ಉಡಾವಣೆ

0

ವಿಶ್ವ ಮಟ್ಟದಲ್ಲಿಯೇ ಚಂದ್ರನ ಅಂಗಳಕ್ಕೆ ಕಾಲಿಟ್ಟ 4ನೇ ದೇಶವಾದ ಭಾರತದ ಹೆಮ್ಮೆ ಹಾಗೂ ಗೌರವದ ಭರವಸೆ ಹಾಗೂ ಕನಸುಗಳನ್ನು ಹೊತ್ತ ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದೆ.ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಆಕಾಶಕ್ಕೆ ಚಿಮ್ಮಿದ ನೌಕೆ ಯಶಸ್ವಿಯಾಗಿದೆ.ಆ.23 ಅಥವಾ 24ರಂದು ಚಂದ್ರನ ಮೇಲೆ ಇಳಿಯಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿರಂತರ ಪ್ರಯತ್ನದ ಫಲದಿಂದ ಚಂದ್ರಯಾನ-3 ವ್ಯೋಮನೌಕೆಯನ್ನು ಹೊತ್ತ ಎಲ್‌ವಿಎಂ-3 ರಾಕೆಟ್ ಚಂದ್ರನಲ್ಲಿಗೆ ಚಿಮ್ಮಿದೆ.ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಮಧ್ಯಾಹ್ನ 2.35ಕ್ಕೆ ಸರಿಯಾಗಿ ನೌಕೆ ಪಯಣ ಆರಂಭಿಸಿತು.ಉಡಾವಣೆ ಅಗುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು ನೌಕೆಯ ಹಂತ ಹಂತದ ಮಾಹಿತಿ ನೀಡಿದ್ದು.ಪ್ರತಿಯೊಂದು ಹಂತ ದಾಟುತ್ತಿದ್ದಂತೆ ವಿಜ್ಞಾನಿಗಳು ಚಪ್ಪಾಳೆ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.ಚಂದ್ರಯಾನದ-3 ರ ಉಡಾವಣೆಯ ದೃಶ್ಯಾವಳಿಗಳನ್ನು ಲಕ್ಷೋಪಲಕ್ಷ ಜನರು ನೇರಪ್ರಸಾರದ ಮೂಲಕ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದ್ದಲ್ಲದೇ ಭಾರತದ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ.

LEAVE A REPLY

Please enter your comment!
Please enter your name here