ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಯಿತು.
ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲ ಡಾ.ಶರತ್ ಕುಮಾರ್ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಪುಂಜಾಲಕಟ್ಟೆ ಸರ್ಕಾರಿ ಪದವಿ ಕಾಲೇಜಿನ ಡಾಕ್ಟರ್ ಲೋಕೇಶ್ ಹಾಗೂ ಬೆಳ್ತಂಗಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಆಂಟೊನಿ ಭಾಗವಹಿಸಿದ್ದರು.
ಈ ಕಾರ್ಯಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅನ್ಯನ್ಯ ಕಾಲೇಜುಗಳಿಂದ 130 ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಗಾರದಲ್ಲಿ ವಾಣಿಜ್ಯ ಸಹಾಯಕ ಪ್ರಾಧ್ಯಾಪಕ ಪ್ರೊಫೆಸರ್ ರಾಜೇಶ್ವರಿ ಸ್ವಾಗತಿಸಿ ವಿದ್ಯಾರ್ಥಿ ನಾಯಕ ಚೇತನ್ ರಾಜ್ ವಂದಿಸಿದರು.
ಕಾರ್ಯಕ್ರಮದಲ್ಲಿ ಐಕ್ಯೂ.ಎ.ಸಿ ಸಂಚಾಲಕ ಡಾ.ಕುಶಾಲಪ್ಪ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯೋಜಕ ಡಾ.ರವಿ.ಎಂ.ಎನ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುಬ್ರಹ್ಮಣ್ಯ.ಕೆ ವಹಿಸಿದ್ದರು.