Site icon Suddi Belthangady

ಬೆಳ್ತಂಗಡಿ: ಸ.ಪ್ರ.ದ.ಕಾಲೇಜಿನಲ್ಲಿ ಅನ್ವೇಷಣ್ 2K23

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಸ್ನಾತ್ತಕೊತ್ತರ ವಿಭಾಗದ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಸಂಶೋಧನಾ ಪ್ರಬಂಧಗಳ ಮಂಡನೆ ಸ್ಪರ್ಧೆ ಅನ್ವೇಷಣ್ 2K23 ಏರ್ಪಡಿಸಲಾಯಿತು. ರಾಜ್ಯದ ಬೇರೆ ಬೇರೆ ಕಾಲೇಜುಗಳಿಂದ 37 ಸಂಶೋಧನಾ ಪ್ರಬಂಧಗಳ ಮಂಡನೆ ಆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಆಳ್ವಾಸ್ ಕಾಲೇಜ್ ಮೂಡಬಿದ್ರೆ ಇಲ್ಲಿನ ಪ್ರಾಂಶುಪಾಲರಾದ ಡಾಕ್ಟರ್ ಕುರಿಯನ್ ನೆರವೇರಿಸಿದರು . ಐಕ್ಯುಎಸಿ ಸಂಚಾಲಕರಾದ ಡಾ. ಕುಶಾಲಪ್ಪ ಇವರು ಸ್ವಾಗತಿಸಿ ಕುಮಾರಿ ಅನುಷಾ ವಂದಿಸಿದರು.

ಕಾರ್ಯಕ್ರಮದಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಚಾಲಕರಾದ ಡಾ. ರವಿ ಎಂ ಎನ್ ಹಾಗೂ ವಿದ್ಯಾರ್ಥಿ ನಾಯಕ ಚೇತನ್ ರಾಜ್ ಉಪಸ್ಥಿತರಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ಇವರು ಅಧ್ಯಕ್ಷತೆ ವಹಿಸಿದ್ದರು.

ಸಂಶೋಧನಾ ಪ್ರಬಂಧಗಳ ಮಂಡನೆಯ ತೀರ್ಪುಗಾರರಾಗಿ ಮೂಡಬಿದ್ರೆ ಎಂಐಟಿ ಕಾಲೇಜಿನ ಡಾಕ್ಟರ್ ಅಭಯಕುಮಾರ್,  ಕಾರ್ಕಳದ ಸರ್ಕಾರಿ ಪದವಿ ಕಾಲೇಜಿನ ಡಾಕ್ಟರ್ ಚಂದ್ರಾವತಿ ಹಾಗೂ ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾಕ್ಟರ್ ಸುಮನ್ ಶೆಟ್ಟಿ ಏನ್ ಭಾಗವಹಿಸಿದ್ದರು.

ಈ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿನ ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.ಈ ಬಹುಮಾನವು ಟ್ರೋಫಿ ಹಾಗೂ ನಗದು ಬಹುಮಾನವನ್ನು ಒಳಗೊಂಡಿದೆ.

Exit mobile version