ಬೆಳ್ತಂಗಡಿ: ಸ.ಪ್ರ.ದ.ಕಾಲೇಜು ವಾರ್ಷಿಕೋತ್ಸವ

0

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇತ್ತೀಚಿನ ವರ್ಷಗಳಲ್ಲಿ ಅತ್ತ್ಯುತ್ತಮ ಮೂಲಭೂತ ಸೌಕರ್ಯಗಳಿಂದ ಒಡಗೂಡಿ ಸರ್ವಾಂಗೀಣ ಪ್ರಗತಿಯನ್ನು ಸಾಧಿಸಿರುವುದು ಹೆಮ್ಮೆಯ ವಿಚಾರ. ಕ್ಷೇತ್ರದ ಜನಪ್ರತಿನಿಧಿಯಾಗಿ ಈ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಇನ್ನಷ್ಟು ಕೊಡುಗೆ ನೀಡುವ ಇರಾದೆ ತನಗಿದ್ದು ಇದಕ್ಕೆ ಎಲ್ಲರ ಪ್ರೋತ್ಸಾಹ ಅತ್ಯಗತ್ಯ ಎಂದು ಕಾಲೇಜಿನ ವಾರ್ಷಿಕೋತ್ಸವ ಉದ್ಘಾಟಿಸಿ ಶಾಸಕ ಹರೀಶ್ ಪೂಂಜ ಹೇಳಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಭಟ್ ಅಜಕಳ ಯುವ ಮನಸುಗಳು ಅಧ್ಯಯನ ಶೀಲತೆಯೊಂದಿಗೆ ಸಾಮಾಜಿಕ ಸ್ಪಂದನವನ್ನು ಮೈಗೂಡಿಸಿಕೊಂಡು ಸಮಾಜದ ಋಣವನ್ನು ತೀರಿಸಬೇಕಾಗಿದೆ ಎಂದರು.ಕಾಲೇಜಿಗೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ ಕಾಲೇಜಿನ ಹಳೇ ವಿದ್ಯಾರ್ಥಿ ಕೆ.ಎಚ್.ಉಮೇಶ್, ಹಾಗೂ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು.

ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಸುಬ್ರಹ್ಮಣ್ಯ.ಕೆ ವಹಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಾಘವ ಎನ್., ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಸಂಚಾಲಕ ಪ್ರೊ.ಸುರೇಶ್ ವಿಟ್ಲ, ವಿದ್ಯಾರ್ಥಿ ಪ್ರತಿಭಾ ವೇದಿಕೆಯ ಅಧ್ಯಕ್ಷ ಚೇತನ್‌ರಾಜ್, ಉಪಾಧ್ಯಕ್ಷ ಅಕ್ಷತಾ, ಕಾರ್ಯದರ್ಶಿ ರಮ್ಯ ಹಾಗೂ ಜೊತೆ ಕಾರ್ಯದರ್ಶಿ ದುರ್ಗೇಶ್ ಉಪಸ್ಥಿತರಿದ್ದರು.

ಡಾ.ಚೇತನ್ ಕುಮಾರ್ ಎಸ್. ವರದಿ ವಾಚಿಸಿ, ಚೇತನ್‌ರಾಜ್ ವಂದಿಸಿ, ಕು. ಸುಚಿತ್ರಾ ಮತ್ತು ಕು. ಚೈತನ್ಯ.ಬಿ ಕಾರ್ಯಕ್ರಮ ನಿರೂಪಿಸಿದರು.

p>

LEAVE A REPLY

Please enter your comment!
Please enter your name here