


ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ದಲ್ಲಿ ಜುಲೈ 18 ರಂದು ಸಸಿಗಳನ್ನು ನೆಡುವುದರ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ವಿಜ್ಞಾನ ಶಿಕ್ಷಕಿ ತ್ರಿವೇಣಿ ಹಾಗೂ ಇವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.


ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಮಾಹಿತಿಯನ್ನು ನೀಡಲಾಯಿತು.
ಪರಿಸರ ಸಂಘದ ವತಿಯಿಂದ ಏರ್ಪಡಿಸಿದ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಅಧ್ಯಕ್ಷತೆಯನ್ನು ವಹಿಸಿದ್ದು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.








