Site icon Suddi Belthangady

ಬೆಳ್ತಂಗಡಿ: ಸಂತ ತೆರೇಸಾ ಕಾಲೇಜಿನಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಬೆಳ್ತಂಗಡಿ: ಜುಲೈ 18 ರಂದು ಸಂತ ತೆರೇಸಾ ಸಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾಲೇಜಿನ ಪ್ರಾಂಶುಪಾಲ ಭಗಿನಿ ಆರೋಗ್ಯ ಪರಿಸರ ಸಂಘ, ವಿಜ್ಞಾನ ಸಂಘ, ಸಾಂಸ್ಕೃತಿಕ ಸಂಘ ಹಾಗೂ ಕಾಲೇಜ್ ಪಾರ್ಲಿಮೆಂಟ್ ಸಂಘವನ್ನು ಸಂಘದ ಎಲ್ಲಾ ಪದಾಧಿಕಾರಿಗಳೊಂದಿಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಎಲ್ಲಾ ಸಂಘದ ಸದಸ್ಯರು ಸಂಘದ ಸಂಯೋಜಕರ ಸಹಕಾರದಲ್ಲಿ ಕಾರ್ಯಕ್ರಮವನ್ನು ನೀಡಿದರು.

ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version