ಬೆಳ್ತಂಗಡಿ: ದ.ಕ ಜಿ.ಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬೆಳ್ತಂಗಡಿ ಮತ್ತು ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಜರಗಿತು.
ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ|| ಪ್ರಕಾಶ್.ಪಿ, ನಟರಾಜ್ ಮುಖ್ಯಾಧಿಕಾರಿ ಪಟ್ಟಣ ಪಂಚಾಯತ್, ಮಹಿಳಾ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಡಾ|| ಚಂದ್ರಕಾಂತ್ ಆಡಳಿತ ವೈದ್ಯಾಧಿಕಾರಿ ತಾಲೂಕು ಸಾರ್ವಜನಿಕ ಆಸ್ಪತ್ರೆ, ರೋಹಿನಿ ಕಪುಚಿನ್ ಕೃಷಿಕ ಸೇವಾ ಸಂಘ ಇವರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ|| ಸೌಜನ್ಯ ವೈದ್ಯಾಧಿಕಾರಿ ಪ್ರಾ.ಆ.ಕೇಂದ್ರ ನೆರಿಯ ಇವರು ಕುಟುಂಬ ಕಲ್ಯಾಣ ಯೋಜನೆಗಳು, ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳ ಕುರಿತು ಮಾಹಿತಿ ನೀಡಿದರು. ಅಮ್ಮಿ.ಎ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ ಇದರ ಆಪ್ತ ಸಮಾಲೋಚಕಿ ರಮ್ಯ.ಬಿ ಇವರು ಪೋಷಕರಾಗಲು ನವದಂಪತಿಗಳ, ದೈಹಿಕ ಹಾಗೂ ಮಾನಸಿಕ ಸಿದ್ಧತೆಯ ಕುರಿತು ಮಾಹಿತಿ ನೀಡಿದರು.
ಬಳಿಕ ಪ್ರಸನ್ನ ಕಾಲೇಜಿನ ವಿದ್ಯಾರ್ಥಿಗಳಿಂದ ಕಿರು ಪ್ರಹಾಸನ ನಡೆಯಿತು.
ಕಾರ್ಯಕ್ರಮವನ್ನು ಅಜಯ್ ನಿರೂಪಿಸಿ, ಡಾ|| ಪ್ರಕಾಶ್.ಪಿ ಸ್ವಾಗತಿಸಿ, ಪುಷ್ಪ ಧನ್ಯವಾದವಿತ್ತರು.