Site icon Suddi Belthangady

ಉಜಿರೆಯಲ್ಲಿ ಉಪಚುನಾವಣೆ: 4ನೇ ವಾರ್ಡ್ ನ ಬಿರುಸಿನ ಮತದಾನ

ಉಜಿರೆ: ಉಜಿರೆ ಗ್ರಾಮ ಪಂಚಾಯತಿನ ಒಂದು ಸದಸ್ಯ ಸ್ಥಾನಕ್ಕೆ ಜುಲೈ 23ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿರುಸಿನ ಮತದಾನ ಬೆಳಿಗ್ಗೆ 7ಗಂಟೆಗೆ ಪ್ರಾರಂಭಗೊಂಡಿದೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿ ರಮೇಶ್ ಶೆಟ್ಟಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿಲ್ ಪ್ರಕಾಶ್ ಡಿ’ಸೋಜಾ ನಡುವೆ ನೇರ ಸ್ಪರ್ಧೆ ನಡೆಯಲಿದೆ.

ಉಜಿರೆ ಗ್ರಾಮ ಪ೦ಚಾಯತ್‌ ವಾರ್ಡ್ 4ರ ‘ಸಾಮಾನ್ಯ’ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೈಸನ್ ವೇಗಸ್ ರವರು ವಿದೇಶಕ್ಕೆ ತೆರಳಿರುವ ಉದ್ದೇಶದಿಂದ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಸ್ಥಾನಕ್ಕೆ ಇಂದು ಜು. 23ರಂದು ನಡೆಯಲಿರುವ ಉಪಚುನಾವಣೆಗೆ ಸಂಬಂಧಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ರಮೇಶ್ ಶೆಟ್ಟಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಅನಿಲ್ ಪ್ರಕಾಶ್ ಡಿ’ಸೋಜಾ ಮತ್ತು ನೇರ ಸ್ಪರ್ಧೆ ಏರ್ಪಟ್ಟಿದೆ.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಒಟ್ಟು 1174 ಮಂದಿ ಮತ ಚಲಾಯಿಸಲು ಅರ್ಹತೆ ಹೊಂದಿದ್ದು. ಅವಶ್ಯವಿದ್ದರೆ ಜುಲೈ 25ರಂದು ಮರು ಮತದಾನ ನಡೆಯಲಿದೆ. ಜು.26ರಂದು ಬೆಳ್ತಂಗಡಿ ತಾಲೂಕು ಪಂಚಾಯತ್ ಕಚೇರಿಯಲ್ಲಿ ಮತ ಎಣಿಕೆ ನಡೆದು ಮಧ್ಯಾಹ್ನದೊಳಗೆ ಫಲಿತಾಂಶ ಘೋಷಣೆಯಾಗಲಿದೆ.

Exit mobile version