ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅನಿಲ್ ಡಿಸೋಜ 491ಮತ ಪಡೆದು ಭರ್ಜರಿ ಜಯ ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತ ರಮೇಶ್ ಶೆಟ್ಟಿ 192 ಮತ ಪಡೆದು ಪರಾಭವಗೊಂಡಿದ್ದಾರೆ.ಜು.23ರಂದು ಬೆಳಿಗ್ಗೆ ಯಿಂದಲೆ ಮಳೆ ಇದ್ದರು ಮಳೆಗೆ ಲೆಕ್ಕಿಸದೆ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದರು.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಿದ್ದು. ಒಟ್ಟು 1174ರಲ್ಲಿ 683 ಜನ ಮತ ಚಲಾಯಿಸಿದ್ದಾರೆ.
337 ಜನ ಗಂಡಸರು, 346 ಜನ ಹೆಂಗಸರು ಮತದಾನದಲ್ಲಿ ಭಾಗವಹಿಸಿದ್ದರು. ಉಜಿರೆ ಗ್ರಾಮ ಪ೦ಚಾಯತ್ ವಾರ್ಡ್ 4ರ ‘ಸಾಮಾನ್ಯ’ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜೈಸನ್ ವೇಗಸ್ ರವರು ವಿದೇಶಕ್ಕೆ ತೆರಳಿರುವ ಉದ್ದೇಶದಿಂದ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಮೇಶ್ ಶೆಟ್ಟಿ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿಲ್ ಪ್ರಕಾಶ್ ಡಿ’ಸೋಜಾ ನಡುವೆ ನೇರ ಸ್ಪರ್ಧೆ ನಡೆದಿತ್ತು.
ಜು.26ರಂದು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಮತ ಎಣಿಕೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿಲ್ ಪ್ರಕಾಶ್ ಡಿಸೋಜಾ 491 ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.ಬಿಜೆಪಿ ಬೆಂಬಲಿತ ಅಭ್ಯರ್ಥಿ ರಮೇಶ್ ಶೆಟ್ಟಿ ಯಾವರು 192ಮತ ವನ್ನು ಪಡೆದು ಪರಾಭವಗೊಂಡಿದ್ದಾರೆ.