Site icon Suddi Belthangady

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ಥ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ತಂಡ ಭೇಟಿ

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆಗೆ ನಾರ್ಥ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ನ್ಯೂಯಾರ್ಕ್ ಯುನಿವರ್ಸಿಟಿಯ ಪೂರ್ವ ವೈದ್ಯಕೀಯ ಶಿಕ್ಷಣ ವಿಧ್ಯಾರ್ಥಿಗಳ ತಂಡವು ಯೇನೆಪೊಯ ದಂತ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಜು.25ರಂದು ಭೇಟಿ ನೀಡಿ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆ ಎದುರಿಸುವ ಸವಾಲುಗಳು ಮತ್ತು ಶ್ರೀ ಕೃಷ್ಣ “ಯೋಗಕ್ಷೇಮ” (ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ) ಇದರ ಬಗ್ಗೆ ಚರ್ಚಿಸಿದರು.ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಗ್ರಾಮೀಣ ಪ್ರದೇಶದ ಆರೋಗ್ಯ ಸೇವೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ.ವಂದನಾ ಎಂ ಇರ್ವತ್ರಾಯ, ವೈದ್ಯಾಧಿಕಾರಿಗಳಾದ ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ, ದಂತ ವೈದ್ಯಾಧಿಕಾರಿ ಡಾ.ಪ್ರಕೃತಿ ಶೆಟ್ಟಿ, ಆಡಳಿತಾಧಿಕಾರಿ ಜ್ಯೋತಿ ವಿ ಸ್ವರೂಪ್, ಯೇನೆಪೊಯ ದಂತ ವೈದ್ಯಕೀಯ ಕಾಲೇಜಿನ ವೈದ್ಯಾಧಿಕಾರಿ ಡಾ.ಪ್ರಮಾದ ಪ್ರಭಾಕರ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version