ಬೆಳ್ತಂಗಡಿ: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜು.27ರಂದು ಸಹ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
p>