ಲಾಯಿಲದ ಆಯಿಲ ಬಳಿ ರಸ್ತೆ ಬದಿಯ ಗುಡ್ಡ ಕುಸಿತ: ರಸ್ತೆ ಕುಸಿಯುವ ಭೀತಿ: 20 ಎಸ್.ಸಿ, ಎಸ್ ಟಿ.ಸೇರಿದಂತೆ 50 ಕ್ಕೂ ಅಧಿಕ ಮನೆಗಳಿಗೆ ಸಂಚಾರಕ್ಕೆ ಸಂಚಕಾರ

0

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ.ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ.ಈ ರಸ್ತೆಯು 20 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಸುಮಾರು 50ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು.ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ.ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ.

ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ, ಹೇಮಚಂದ್ರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

LEAVE A REPLY

Please enter your comment!
Please enter your name here