ಬೆಳ್ತಂಗಡಿ : ಗೇರುಕಟ್ಟೆ ಮನ್ ಶರ್ ಪದವಿಪೂರ್ವ ಕಾಲೇಜು ಶಿಕ್ಷಣ ಸಂಸ್ಥೆಗೆ ಸರಕಾರದಿಂದ ಅಧಿಕೃತವಾಗಿ ಮಾನ್ಯತೆ ಪಡೆದ ಮನ್ ಶರ್ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಸುಸಜ್ಜಿತ ಪ್ರಯೋಗಾಲಯವು ಜು.26 ರಂದು ಉದ್ಘಾಟನೆಗೊಂಡಿತು.
ಉದ್ಘಾಟನೆಯನ್ನು ಮನ್ ಶರ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಸಯ್ಯದ್ ಉಮರ್ ಅಸ್ಸಖಾಫ್ ತಂಙಳ್ ರವರು ನೆರವೇರಿಸಿದರು. ವಿಜ್ಞಾನ ಪ್ರಯೋಗಾಲಯದ ವಿಶೇಷತೆಯನ್ನು ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳರವರು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಅಹ್ಮದ್ ಮೋನು ಮುಖ್ಯ ಅತಿಥಿಗಳಾಗಿ ಹಸನ್ ಸಖಾಫಿ ಕುಪ್ಪೆಟ್ಟಿ ಹಾಗೂ ಸಂಸ್ಥೆಯ ಹಿತೈಷಿಗಳು ಉಪಸ್ಥಿತರಿದ್ದರು.
ಸಂಸ್ಥೆಯ ಉಪನ್ಯಾಸಕರು,ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮನ್ ಶರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೌಸರ್ ಪಲ್ಲಾದೆ ಸ್ವಾಗತಿಸಿದರು.ಸಂಸ್ಥೆಯ ಆಡಳಿತಾಧಿಕಾರಿ ರಶೀದ್ ಕುಪ್ಪೆಟ್ಟಿ ವಂದಿಸಿದರು.