

ಬೆಳ್ತಂಗಡಿ: ವಿದ್ಯಾರ್ಥಿಗಳು ಉತ್ತಮ ಅವಕಾಶಗಳನ್ನು ತಮ್ಮದಾಗಿಸಿ ಆತ್ಮಸ್ಥೈರ್ಯಗಳನ್ನು ಬೆಳೆಸಿಕೊಂಡಾಗ ಯಶಸ್ಸನ್ನು ಕಾಣಬಹುದು ಎಂದು ಶ್ರೀ.ಧ.ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಾ| ಮಹೇಶ್ ಶೆಟ್ಟಿ ಹೇಳಿದರು.
ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದೈನಂದಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಸರಿ ತಪ್ಪುಗಳನ್ನು ತಿದ್ದಿಕೊಂಡು ಇದ್ದುದರಿಂದಲೇ ತೃಪ್ತಿಯನ್ನು ಹೊಂದಿ, ಸಮಾಜದಲ್ಲಿ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಬೇಕು.ರಾಷ್ಟ್ರಪ್ರಜ್ಞೆ ಹಾಗೂ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.
ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶಂಕರ್ ರಾವ್ ಹಾಗೂ ಎನ್.ಎಸ್.ಎಸ್. ಘಟಕ ನಾಯಕರಾದ ಗೌತಮ್, ಸನುಷಾ ಪಿಂಟೋ ಉಪಸ್ಥಿತರಿದ್ದರು. ಎನ್.ಎಸ್.ಎಸ್. ಸಹಕಾರ್ಯಕ್ರಮಾಧಿಕಾರಿ ಕಾಮಾಕ್ಷಿ ಸ್ವಾಗತಿಸಿ, ಸಾಹಿತ್ಯ ನಿರೂಪಿಸಿ, ಲತಾಶ್ರೀ ಧನ್ಯವಾದ ನೀಡಿದರು.