ದೆಹಲಿಯಲ್ಲಿ ಕರಾರು ಒಪ್ಪಂದ ಪತ್ರಕ್ಕೆ ಸಹಿ

0

ಉಜಿರೆ: ನವದೆಹಲಿಯಲ್ಲಿ ಜು.28ರಂದು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು.2023ರ ಅಗಸ್ಟ್ 1 ರಿಂದ 2026ರ ಜುಲೈ 31ರ ವರೆಗೆ ಕರಾರುಪತ್ರ ಚಾಲ್ತಿಯಲ್ಲಿರುತ್ತದೆ.

ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯ ಸಭಾ ಸದಸ್ಯ ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಕರ್ಮ ಝಿಂಪ ಭಾಟಿಯಾ ಕರಾರು ಪತ್ರಕ್ಕೆ ಸಹಿ ಹಾಕಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್, ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಕೆ.ಎನ್. ಜನಾರ್ದನ್, ಜಂಟಿ ನಿರ್ದೇಶಕರು, ಉಪಆಯುಕ್ತರು, ಶಿವಸೋನಿ, ನವೀನ್ ಕುಮಾರ್, ವಿಶಾಲ್ ಗುಪ್ತಾ ಮತ್ತು ಕಾನೂನು ಸಲಹೆಗಾರ ಲೋಕೇಶ್ ಸುಖ್‌ವಾನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here