

ಮುಂಡಾಜೆ: ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ಇಲ್ಲಿ ಇತ್ತೀಚಿಗೆ ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಭಾರತೀಯ ನೌಕಾಪಡೆಯ ಸಬ್ ಲೆಫ್ಟಿನೆಂಟ್ ಚಾರ್ಮಾಡಿಯ ಹವ್ಯಾಸ್ ಇವರು ಮಾತನಾಡಿ ಕಾರ್ಗಿಲ್ ಸಮರದ ವಿವಿಧ ಘಟನೆಗಳ ಬಗ್ಗೆ ಹಾಗೂ ಹುತಾತ್ಮ ಯೋಧರ ಶೌರ್ಯ ಪರಾಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯಚಂದ್ರ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರಾಂಶುಪಾಲೆ ಜಾಲಿ ಓ ಎ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಾರ್ಗಿಲ್ ಯುದ್ಧದ ಬಗ್ಗೆ ಬಿತ್ತಿ ಪತ್ರಿಕೆ ರಚನಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಎನ್ ಎಸ್ ಎಸ್ ಹಾಗೂ ರೋವರ್ಸ್ ರೆಂಜರ್ಸ್ ಘಟಕದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಾಣಿಜ್ಯಶಾಸ್ತ್ರ ಉಪನ್ಯಾಸಕ ಪದ್ಮನಾಭ ಬಿ ಕೆ ಸ್ವಾಗತಿಸಿ, ಇಂಗ್ಲೀಷ್ ಉಪನ್ಯಾಸಕರಾದ ಪುರುಷೋತ್ತಮ ಶೆಟ್ಟಿ ವಂದಿಸಿದರು.ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.