Site icon Suddi Belthangady

ಧರ್ಮಸ್ಥಳ: ವ್ಯಸನಮುಕ್ತ ಸಾಧಕರ ಸಮಾವೇಶ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಶ್ರೀ ಧ. ಮ. ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ ಇದರ ಆಶ್ರಯದಲ್ಲಿ
ರಾಜ್ಯಾದ್ಯಂತ ಮದ್ಯ ವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಪಾನಮುಕ್ತರಾದ ನವಜೀವನ ನಡೆಸುತ್ತಿರುವ ಜನ ಜೀವನ ಸದಸ್ಯರ ಶತದಿನೊತ್ಸವ ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತರ ಸಮಾವೇಶ ಜು.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾ ಸಭಾ ಭವನದ ನಡೆಯಿತು ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಸಭಾಪತಿ ಯು.ಟಿ.ಖಾದರ್ ಉದ್ಘಾಟಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರಯವರು ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದಲ್ಲಿ ವ್ಯಸನಮುಕ್ತ ಸಾಧಕರಿಗೆ ಸನ್ಮಾನ, ಗುರುತಿನ ಚೀಟಿ, ಪ್ರಮಾಣ ಪತ್ರ ವಿತರಿಲಾಯಿತು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ವಾರ್ಷಿಕ ವರದಿ ಮಂಡಿಸುವರು.ಜನ ಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಿಸ್ ಪ್ರಸ್ತಾವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಜಾಗೃತಿ ಅಣ್ಣ, ಜಾಗೃತಿ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ಎ. ರಾಜಣ್ಣ, ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್, ನಿಕಟ ಪೂರ್ವ ಅಧ್ಯಕ್ಷ ಸತೀಶ್ ಹೊನ್ನವಳ್ಳಿ, ನಿರ್ದೇಶಕ ಶಾಂತಾರಾಮ ಪೈ, ಟ್ರಷ್ಟಿ ಸಂಪತ್ ಸಾಮ್ರಾಜ್ಯ, ಗೌರವ ಉಪಸ್ಥಿತರಿದ್ದರು.

ಜಗದೀಶ್ ಗುಬ್ಬಿ, ನವ್ಯ ಕುವೆಂಪು ನಗರ ಮೈಸೂರು, ಟೋಪೇ ಗೌಡ ತುರುವೇಕೆರೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.ರಾಜ್ಯಾದ್ಯಂತ ನಡೆದ ಮದ್ಯವರ್ಜನ ಶಿಬಿರಗಳ 1,733 ಮಂದಿ ವ್ಯಸನಮುಕ್ತರು ಮತ್ತು ಅವರ ಕುಟುಂಬಸ್ಥರು ಸೇರಿದಂತೆ 2,700 ಮಂದಿ ಈ ಸಮಾವೇಶದಲ್ಲಿ ಭಾಗವಹಿಸಿದ್ದರು.ಯೋಜನೆಯ ನಿರ್ದೇಶಕರುಗಳು, ಕಾರ್ಯಕರ್ತರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಜರಿದ್ದರು.

Exit mobile version